ಸಾರಿಗೆ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಹಾಲಿನ ಗುಣಮಟ್ಟವನ್ನು ಸುಧಾರಿಸಲು, ಸ್ಥಳೀಯ ರೈತರಿಗೆ ನೇರವಾಗಿ ಪ್ರಯೋಜನವನ್ನು ನೀಡಲು ಸುಮಾರು 124 ಬಲ್ಕ್ ಮಿಲ್ಕ್ ಕೂಲರ್ ಗಳನ್ನು (ಬಿಎಂಸಿ) ಸ್ಥಾಪಿಸಲು ಮುಂದಾಳತ್ವ ವಹಿಸಿದೆ. ಕೃಷಿ ಅಭಿವೃದ್ಧಿಗೆ ಅನುಕೂಲವಾಗುವಂತೆ ರೈತರಿಗೆ ಶೂನ್ಯ ಬಡ್ಡಿದರದ ಸಾಲವನ್ನು ಖಚಿತಪಡಿಸುವುದು, ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಮೂಲಕ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲವನ್ನು ಒದಗಿಸುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವುದು ಈ ಕ್ಷೇತ್ರದ ಪ್ರಮುಖ ಉದ್ದೇಶವಾಗಿದೆ.