ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಮತ್ತು ಜೀವನೋಪಾಯದ ಭದ್ರತೆಯನ್ನು ಒದಗಿಸುವುದರೊಂದಿಗೆ, ರೈತ ಮತ್ತು ಕಾರ್ಮಿಕ ವರ್ಗಗಳಿಗೆ ಉದ್ಯೋಗದ ಭರವಸೆಯನ್ನು ಸಾಕಾರಗೊಳಿಸಲಾಗಿದೆ. ಸಧ್ಯ ಗ್ರಾಮೀಣ ಪ್ರದೇಶಗಳಲ್ಲಿನ ಉಪಯೋಗಕ್ಕೆ ಬರುವ ಆಸ್ತಿ ಮತ್ತು ಅವುಗಳ ಮೂಲಸೌಕರ್ಯಗಳನ್ನು ವೃದ್ಧಿಸುವಲ್ಲಿ ಡಿಕೆ ಸುರೇಶ್ ಅದ್ಬುತವಾಗಿ ಕೆಲಸ ನಿರ್ವಹಿಸಿದ್ದಾರೆ. ಅಷ್ಟೆ ಅಲ್ಲದೆ ಕ್ಷೇತ್ರದಲ್ಲಿ MGNREGA ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಮೂಲಕ, ಡಿಕೆ ಸುರೇಶ್ ಅವರ ಅಪಾರ ಕೊಡುಗೆಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಅವರನ್ನು ಗುರುತಿಸಿ ಗೌರವಿಸಲಾಗಿದೆ.